ಕಿಚ್ಚ ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್‍ಗೆ ಪ್ರಜ್ಞಾವಂತ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯ

Webdunia
ಭಾನುವಾರ, 9 ಏಪ್ರಿಲ್ 2023 (14:23 IST)
ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಕಿಡಿ ಕಾರಿದ್ರು.ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಮಗೆ ಬೇಕಾದಂತೆ ವಿಶ್ಲೇಷಿಸಿ ಬಳಸುತ್ತಾರೆ ಎಂದು ಟೀಕಿಸಿದರು.ಕಿಚ್ಚ ಸುದೀಪ್ ಅವರು ಪ್ರಜಾಸತ್ತೆಯ ಸ್ವಾತಂತ್ರ್ಯದ ಆಧಾರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮತ್ತು ಬಿಜೆಪಿ ಬೆಂಬಲಿಸುವ ನಿರ್ಣಯ ತೆಗೆದುಕೊಂಡಿದ್ದಾರೆ. ಆದರೆ, ಇವೆರಡು ಪಕ್ಷಗಳು ಕಿಚ್ಚ ಸುದೀಪ್ ವಿರುದ್ಧ ಟೀಕೆ ಮಾಡುತ್ತಿವೆ. ವಿವಿಧ ಏಜೆನ್ಸಿಗಳಿಂದ ತನಿಖೆ ತಪ್ಪಿಸಿಕೊಳ್ಳಲು ಹೀಗೆ ಮಾಡಿದ್ದಾಗಿ ಟೀಕಿಸುತ್ತಿವೆ ಎಂದು ಆಕ್ಷೇಪಿಸಿದರು.ಕಾಂಗ್ರೆಸ್ ಸಮರ್ಥನೆ ಮಾಡುವವರಾದರೆ ಅದು ಪ್ರಜಾಸತ್ತೆಗೆ ಪೂರಕ ಎನ್ನುವ ನಿಲುವು ಆ ಪಕ್ಷದ ಮುಖಂಡರದು. ಬಿಜೆಪಿಯಲ್ಲಿ ಪ್ರಚಾರಕ್ಕೆ ಹೊರಗಿನ ಅಗತ್ಯವಿದೆ ಎಂದು ಆಕ್ಷೇಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments