Select Your Language

Notifications

webdunia
webdunia
webdunia
webdunia

ಬಿಸಿ ರೋಡ್ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು

ಬಿಸಿ ರೋಡ್ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು
bengaluru , ಮಂಗಳವಾರ, 31 ಆಗಸ್ಟ್ 2021 (16:13 IST)
ಕೆಎಸ್‌ಆರ್‌ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‌ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ಕನ್ನಡ ಜಿ
ಲ್ಲೆಯ ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸರ್ಕಾರದ ಸೌಲಭ್ಯಗಳು ನೀಡಿಕೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರೆಂದು ತಾರತಮ್ಯ ಮಾಡಲಾಗುತ್ತಿದೆ. ಆಹಾರದ ಕಿಟ್‌ಗಳು ಫಲಾನುಭವಿ ಕಾರ್ಮಿಕರ ಬದಲು ಬಿಜೆಪಿ ಕಾರ್ಯಕರ್ತರ ಪಾಲಾಗುತ್ತಿದೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಿ ಎಲ್ಲರಿಗೂ ಸಮಾನವಾಗಿ ಸೌಲಭ್ಯಗಳು ಸಿಗಬೇಕು. ಈ ಅನ್ಯಾಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತಹಶೀಲ್ದಾರ್ ಅವರನ್ನು ಆಗ್ರಹಿಸಿದರು.
ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಬೇಬಿ ಕುಂದರ್, ಸುದೀಪ್ ಕುಮಾರ ಶೆಟ್ಟಿ, ಜಯಂತಿ ಪುಜಾರಿ, ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಮಹಮ್ಮದ್ ಶರೀಫ್, ಮಾಯಿಲಪ್ಪ ಸಾಲ್ಯಾನ್, ಜನಾರ್ಧನ ಚೆಂಡ್ತಿಮಾರ್, ಗಂಗಾಧರ್ ಪೂಜಾರಿ, ಸದಾಶಿವ ಬಂಗೇರ, ಪ್ರಶಾಂತ್ ಕುಲಾಲ್, ಮಧುಸೂದನ್ ಶೆಣೈ, ಯೂಸುಫ್ ಕರಂದಾಡಿ, ಇಬ್ರಾಹಿಂ ನವಾಝ್, ಆಲ್ಬರ್ಟ್ ಮಿನೇಜಸ್, ಮಹಮ್ಮದ್ ನಂದಾವರ, ಸಂಪತ್ ಕುಮಾರ್ ಶೆಟ್ಟಿ , ಸಿದ್ದಿಕ್ ಗುಡ್ಡೆಯಂಗಡಿ, ಮತ್ತಿತರರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಹಬ್ಬ ಆಚರಣೆ ಬಗ್ಗೆ ಸೆ.5ಕ್ಕೆ ತೀರ್ಮಾನ: ಸಚಿವ ನಾರಾಯಣ್