Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಭರ್ಜರಿ ಟಾಂಗ್ ನೀಡಿದ ಖರ್ಗೆ

ಬಿಜೆಪಿಗೆ ಭರ್ಜರಿ ಟಾಂಗ್ ನೀಡಿದ ಖರ್ಗೆ
ನವದೆಹಲಿ , ಭಾನುವಾರ, 27 ಜನವರಿ 2019 (14:47 IST)
ಮುಂಬರುವ ಲೋಕಸಭಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ ಜೆಡಿಎಸ್ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಮತ್ತು ಆರ್.ಎಸ್.ಎಸ್. ಪ್ರಯತ್ನಿಸುತ್ತಿವೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿಜೆಪಿ ನಾಯಕರು, ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರನ್ನು ಸೆಳೆಯಲು ನಾವು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ರಾಜ್ಯಪಾಲರ ಆಡಳಿತ ಜಾರಿಗೆ ತರಲು ಬಿಜೆಪಿ ಮತ್ತು ಆರ್.ಎಸ್.ಎಸ್. ಪ್ರಯತ್ನಿಸುತ್ತಿವೆ. ಆದರೆ ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ಸಚಿವರು ಪಕ್ಷವನ್ನು ಬಲವಾಗಿ ಹಿಡಿದಿಟ್ಟುಕೊಂಡಿದ್ದಾರೆ. ಬಿಜೆಪಿ ನಾಯಕರು ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಲಿ. ನಮ್ಮ ಶಿಬಿರದಿಂದ ಒಬ್ಬ ಶಾಸಕನನ್ನು ಬಿಜೆಪಿ ಸೆಳೆದರೆ, ನಾವು 10 ಶಾಸಕರನ್ನು ಕಡೆಯಿಂದ ಸೆಳೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಗೆ ಪಕ್ಷಾಂತರ ಮಾಡುವಂತೆ ಕಾಂಗ್ರೆಸ್ ಶಾಸಕರ ಮೇಲೆ ಒತ್ತಡ ಹೇರಲು ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನೇರವಾಗಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಮೂಲಕವೇ ಆಪರೇಷನ್ ಕಮಲ ನಡೆಸಲು ಮುಂದಾಗಿದೆ. 2008 ರಲ್ಲಿ ಕೆಲಸವನ್ನು ಬಿಜೆಪಿ ನಾಯಕ ಯಡಿಯೂರಪ್ಪ ಮಾಡಿದ್ದರು. ಈಗ ಮತ್ತೆ ಅದನ್ನೇ ಮಾಡಲಾಗುತ್ತಿದೆ. ಆಪರೇಷನ್ ಕಮಲ ಬಿಜೆಪಿಯ ಕೂಸಾಗಿತ್ತು. ಕೆಲವು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ, ಅಧಿಕಾರ ಮತ್ತು ಕೆಲವರಿಗೆ ಬೆದರಿಕೆ ಹಾಕುವ ತಂತ್ರ ಬಳಸಿ, ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜನ್ಮ ನೀಡಿದ ಮಕ್ಕಳಿಗೆ ವಿಷ ನೀಡಿ ತಾಯಿ ಆತ್ಮಹತ್ಯೆ