Publish Date: Fri, 22 Feb 2019 (12:38 IST)
Updated Date: Fri, 22 Feb 2019 (12:40 IST)
ಶಿವಮೊಗ್ಗ : ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ರುದ್ರೇಶ್, ಗೋಪಿ ಹಲ್ಲೆಗೊಳಗಾದ ಜೆಡಿಎಸ್ ಕಾರ್ಯಕರ್ತರು. ಇವರಿಬ್ಬರು ಬೈಕ್ ನಲ್ಲಿ ಬರುವಾಗ ಕಾಂಗ್ರೆಸ್ ಕಾರ್ಯಕರ್ತರಾದ ಶರತ್, ವಿಶ್ವ, ವಿನಯ್, ಸುನಿಲ್, ಮೊದಲಾದವರು ಹೊಸಸೇತುವೆ ಬಳಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರುದ್ರೇಶ್, ಗೋಪಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಕೀಯ ದ್ವೇಷವೇ ಘಟನೆಗೆ ಕಾರಣವೆನ್ನಲಾಗಿದ್ದು, ಭದ್ರಾವತಿ ಹಳೆ ನಗರ ಠಾಣೆಗೆ ದೂರು ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.