Select Your Language

Notifications

webdunia
webdunia
webdunia
webdunia

ವೈರಲ್ ಆಗಿದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಕರಪತ್ರ

ವೈರಲ್ ಆಗಿದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಕರಪತ್ರ
ಮಂಡ್ಯ , ಬುಧವಾರ, 31 ಅಕ್ಟೋಬರ್ 2018 (07:51 IST)
ಮಂಡ್ಯ : ಮಂಡ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ  ಕಣಕ್ಕಿಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ ಅಭ್ಯರ್ಥಿ ಅಂತಾ ಕರಪತ್ರದಲ್ಲಿ ತಪ್ಪಾಗಿ ಮುದ್ರಿಸುವುದರ ಮೂಲಕ ಎಡವಟ್ಟು ಮಾಡಿದ್ದು, ಇದೀಗ ಈ ವಿಚಾರ  ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಗಿದೆ.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದಲಿತರ ಹಾಗೂ ರೈತರ ಪರ ಕಾಳಜಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಮತ ನೀಡಲು ಮನವಿ ಎಂದು ಅನಂತರಾಯಪ್ಪ ಅವರು ಮುದ್ರಿಸಿದ್ದಾರೆ. ಈ ಕರಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯವರು ಜನರಲ್ಲಿ ತಪ್ಪು ಭಾವನೆ ಮೂಡಿಸಲು, ಬಿಜೆಪಿ ಮತಗಳನ್ನು ಸೆಳೆಯಲು ಜೆಡಿಎಸ್‌ ಮುಖಂಡರು ಈ ರೀತಿ ಮಾಡಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ತಕ್ಷಣ ಎಲ್‌.ಆರ್‌.ಶಿವರಾಮೇಗೌಡರ ಉಮೇದುವಾರಿಕೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಕೂಲ್ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕ ಅರೆಸ್ಟ್