Publish Date: Thu, 15 Jun 2017 (11:32 IST)
Updated Date: Thu, 15 Jun 2017 (11:41 IST)
ವಿಧಾನಪರಿಷತ್ ಸಭಾಪತಿ ಸ್ಥಾನದಿಂದ ಡಿ.ಎಚ್. ಶಂಕರಮೂರ್ತಿಯವರನ್ನ ಕೆಳಗಿಳಿಸಲು ಶತಾಯಗತಾಯ ಪ್ರಯತ್ನ ಮುಂದುವರೆಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜೆಡಿಎಸ್ ಬೇಡಿಕೆಗಳಿಗೆ ಓಕೆ ಎಂದಿದೆ.
ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಹಿರಿಯ ನಾಯಕರಾದ ಬಸವರಾಜ ಹೊರಟ್ಟಿಯವರನ್ನ ಸಭಾಪತಿ ಸ್ಥಾನದ ಅಭ್ಯರ್ಥಿಯಾಗಿ ಪರಿಗಣಿಸಿದರೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಬೆಂಬಲಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಮ್ಮ ಮನಸ್ಸಿನಲ್ಲೂ ಇದೇ ವಿಷಯವಿದೆ. ಬಸವರಾಜ ಹೊರಟ್ಟಿಯವರನ್ನ ಪರಿಷತ್ ಸಭಾಪತಿ ಅಭ್ಯರ್ಥಿಯಾಗಿ ಪರಿಗಣಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್`ನ ಎಂಎಲ್`ಸಿಗಳ ಸಭೆ ನಡೆಯುತ್ತಿದೆ. ಸಭೆಯಲ್ಲಿ 13 ಎಂಎಲ್`ಸಿಗಳೂ ಭಾಗವಹಿಸಿದ್ದಾರೆ.