Select Your Language

Notifications

webdunia
webdunia
webdunia
Thursday, 10 April 2025
webdunia

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಟ್ವೀಟ್ ನಲ್ಲಿ ವಾಗ್ದಾಳಿ

Congress attack against BJP in tweet
bangalore , ಶುಕ್ರವಾರ, 3 ಮಾರ್ಚ್ 2023 (20:18 IST)
ಬಿಜೆಪಿ ಶಾಸಕನ ಪುತ್ರನ ಕಚೇರಿ ಮೇಲೆ ಲೋಕಾಯುಕ್ತ ರೇಡ್ ವಿಚಾರ ಸಂಭಂದಪಟ್ಟಂತೆ ಕಾಂಗ್ರೆಸ್‌ ಟ್ವೀಟ್ ಮಾಡಿದ್ದು. ಈಗ ಕಮಿಷನ್ ಆರೋಪ ಒಪ್ಪುವಿರಾ ಸಿಎಂ ಬೊಮ್ಮಾಯಿ ಎಂದು ಪ್ರಶ್ನೆ ಮಾಡಿದೆ. ಕಮಿಷನ್ ಲೂಟಿಗೆ ದಾಖಲೆ ಕೇಳುವ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ ಈಗ ಕಮಿಷನ್ ಆರೋಪ ಒಪ್ಪುವಿರಾ ಚುನಾವಣೆ ಖರ್ಚಿಗಾಗಿ ಬಿಜೆಪಿಯ ಎಲೆಕ್ಷನ್ ಕಲೆಕ್ಷನ್‌ ಬಿರುಸಿನಿಂದ ಸಾಗಿದೆ,ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ ದೋಚಿ ಬಾಚುತ್ತಿದೆ.ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ.ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು.ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ.ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಆಗು ಎಂದು ಪೀಡಿಸುತ್ತಿದ್ದ ಕಾಮುಕನಿಗೆ ಚಪ್ಪಲಿಯಿಂದ ಥಳಿಸಿದ ಬಾಲಕಿ