Webdunia - Bharat's app for daily news and videos

Install App

ಬ್ಲ್ಯಾಕ್ ಮನಿಯನ್ನು ವೈಟ್ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ: ಶೋಭಾ ಕರಂದ್ಲಾಜೆ

Webdunia
ಶನಿವಾರ, 19 ನವೆಂಬರ್ 2016 (11:47 IST)
ಕಪ್ಪು ಹಣ ತಡೆಗಟ್ಟಲು 500, 1000 ರೂಪಾಯಿ ನೋಟ್ ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲ್ಯಾಕ್ ಮನಿಯನ್ನು ವೈಟ್ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪಿಸಿದ್ದಾರೆ. 
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಮೂಲಕ ಬ್ಲ್ಯಾಕ್ ಮನಿಯನ್ನು ವೈಟ್ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ. ದೇಶವನ್ನು ಲೂಟಿ ಹೋಡಿದವರಿಗೆ ಪ್ರಧಾನಿ ನರೇಂದ್ರ ಮೋದಿ ಬಿಸಿ ಮುಟ್ಟಿಸಿದ್ದಾರೆ ಎಂದು ಕಿಡಿಕಾರಿದರು. 
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಮೋದಿ ಅವರು ತೆಗೆದುಕೊಂಡಿರುವ ಕಠಿಣ ನಿರ್ಧಾರವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ ಎಂದು ಅಭಿಪ್ರಾಯಪಟ್ಟ ಅವರು, ಇನ್ನೂ ಕೆಲವೇ ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯಲಿದೆ ಎಂದು ಭರವಸೆ ನೀಡಿದರು. 
 
ಕಪ್ಪು ಹಣದ ವಿರುದ್ಧ ಪ್ರಧಾನಿ ಅವರ ತೆಗೆದುಕೊಂಡಿರುವ ಕಠಿಣ ನಿರ್ಧಾರದಿಂದ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಗೆ ತಲೆ ನೋವಾಗಿದೆ. ಹೀಗಾಗಿ ಪ್ರತಿಪಕ್ಷಗಳು ಸಾರ್ವಜನಿಕರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ದೂರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments