Publish Date: Wed, 11 Apr 2018 (09:12 IST)
Updated Date: Wed, 11 Apr 2018 (09:14 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಟಿಕೆಟ್ ಫೈನಲ್ ಪ್ರಕ್ರಿಯೆ ನಡೆಯುತ್ತಿದ್ದು, ಚನ್ನಪಟ್ಟಣ ಕ್ಷೇತ್ರ ಮತ್ತೊಂದು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ.
ಬಿಜೆಪಿಯಿಂದ ಸಿಪಿ ಯೋಗೇಶ್ವರ್ ಪ್ರತಿನಿಧಿಸುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಒಂದು ವೇಳೆ ಇದು ಪಕ್ಕಾ ಆದರೆ ವರುಣಾ, ಚಾಮುಂಡೇಶ್ವರಿ ನಂತರ ಚನ್ನಪಟ್ಟಣ ಕ್ಷೇತ್ರ ಮತ್ತೊಂದು ಪ್ರತಿಷ್ಠಿತ ಕ್ಷೇತ್ರವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.