Webdunia - Bharat's app for daily news and videos

Install App

ಕಾಂಗ್ರೆಸ್-ಬಿಜೆಪಿ ಸ್ಟಾರ್ಟ್ ಅಪ್ ವಾರ್​

Webdunia
ಬುಧವಾರ, 6 ಏಪ್ರಿಲ್ 2022 (18:52 IST)
ಬೆಂಗಳೂರಿನ ಕೋರಮಂಗಲದ ಖಾತಾ ಬುಕ್ ಸಿಇಓ ರವೀಶ್ ನರೇಶ್ ಐದು ದಿನಗಳ ಹಿಂದೆ ಬೆಂಗಳೂರು ಮೂಲಭೂತ ಸೌಕರ್ಯ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದರು. ಈ ಟ್ವೀಟನ್ನೇ ಬಂಡವಾಳ ಮಾಡಿಕೊಂಡು ತೆಲಂಗಾಣ ಸಚಿವ ಕೆಟಿಆರ್ ನಿಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಂಡು ನಮ್ಮ ಹೈದರಾಬಾದ್‍ಗೆ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ. ಕೆಟಿಆರ್ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಮ್ಮ ಚಾಲೆಂಜ್ ಸ್ವೀಕರಿಸುತ್ತೇನೆ. 2023ಕ್ಕೆ ನಮ್ಮದೇ ಸರ್ಕಾರ ಬರುತ್ತೆ, ಆಗ ಬೆಂಗಳೂರನ್ನ ಉತ್ತಮ ನಗರವಾಗಿ ರೂಪಿಸುತ್ತೇವೆ ಎಂದಿದ್ದಾರೆ. ಹೀಗೆ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಒಂದರ ಸಿಇಓ ಮಾಡಿದ ಟ್ವೀಟ್ ಈಗ ರಾಜಕೀಯ ಕೆಸರೆಚಾಟಕ್ಕೆ ವೇದಿಕೆಯಾಗಿದೆ. ಇದಕ್ಕೆ ಬೊಮ್ಮಾಯಿ ತಿರುಗೇಟು ನೀಡಿದ್ದು, ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರ್ತಿದ್ದಾರೆ. ಬರೀ ಭಾರತದ ಉದ್ಯಮಿಗಳಷ್ಟೇ ಬರುತ್ತಿಲ್ಲ. ಅತೀ ಹೆಚ್ಚು ಸ್ಟಾರ್ಟಪ್‍ಗಳು ಬೆಂಗಳೂರಿನಲ್ಲಿವೆ. ಬೆಂಗಳೂರನ್ನು ಹೈದರಾಬಾದ್​ಗೆ, ಕರ್ನಾಟವನ್ನು ತೆಲಂಗಾಣಕ್ಕೆ ಹೋಲಿಸುವುದು ಹಾಸ್ಯಾಸ್ಪದ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments