Webdunia - Bharat's app for daily news and videos

Install App

ಸಿಎಂ ಸಿದ್ದು-ಮಲ್ಲಿಕಾರ್ಜುನ ಖರ್ಗೆ ಕಿತ್ತಾಟಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಬಡವಾದರು!

Webdunia
ಶನಿವಾರ, 14 ಏಪ್ರಿಲ್ 2018 (06:58 IST)
ಬೆಂಗಳೂರು: ಎಲ್ಲಾ ಲೆಕ್ಕಾಚಾರದಂತೆ ನಡೆದಿದ್ದರೆ ಇಂದು ಕಾಂಗ್ರೆಸ್ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ನಿನ್ನೆ ಸಂಜೆ ಬಿಡುಗಡೆ ಮಾಡಬೇಕಿತ್ತು. ಆದರೆ ಸಿಎಂ ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ನಡುವಿನ ಕಿತ್ತಾಟಕ್ಕೆ ಈ ಪಟ್ಟಿ ಬಲಿಯಾಯಿತು.

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಗೆ ಬಂದ ಸಿಎಂ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ತಮ್ಮದೇ ಆಯ್ಕೆಯ ಅಭ್ಯರ್ಥಿಗಳ ಪಟ್ಟಿ ಹಿಡಿದುಕೊಂಡು ಬಂದಿದ್ದರು. ಆದರೆ ಸಿಎಂ ನೀಡಿದ ಪಟ್ಟಿಯನ್ನು ಖರ್ಗೆ ಒಪ್ಪಲಿಲ್ಲ.

ಪಟ್ಟಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಹೆಚ್ಚಿನ ಒತ್ತು ನೀಡಬೇಕೆಂಬುದು ಖರ್ಗೆ ವಾದವಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ತಮ್ಮ ನೆಚ್ಚಿನ ವ್ಯಕ್ತಿಗಳಿಗೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಮೊದಲ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಇವರಿಬ್ಬರ ಕಿತ್ತಾಟಕ್ಕೆ ಅಭ್ಯರ್ಥಿಗಳು ಬಡವಾದರು. ಇದೀಗ ಇನ್ನೊಂದು ಸುತ್ತಿನ ಸಭೆ ಬಳಿಕ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಲಾಗುವುದು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments