Publish Date: Thu, 06 Apr 2023 (12:30 IST)
Updated Date: Thu, 06 Apr 2023 (12:34 IST)
ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತಿರುವ ವಿಚಾರವನ್ನು ಸ್ವಾಗತಿಸುತ್ತೇನೆ. ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಚಲನಚಿತ್ರದಲ್ಲಿ ಫೇಮಸ್ ಆಗಿರುವಂತಹ ವ್ಯಕ್ತಿ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಎಂದು ಹೇಳಿರುವ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ.
ಈ ವಿಚಾರವನ್ನು ಸಹಿಸೋಕಾಗದೇ ಕಾಂಗ್ರೆಸ್ನವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ವಿ ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಬಿಎಸ್ವೈ, ಹೈಕಮಾಂಡ್ ಏನು ಹೇಳುತ್ತೋ ಅದರಂತೆಯೇ ನಡೆಯುತ್ತೆ. ಶುಕ್ರವಾರ ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.