Daily Horoscope
✕

ಪರಿಶಿಷ್ಟರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ : ಸುಧಾಕರ್

Webdunia
ಗುರುವಾರ, 27 ಏಪ್ರಿಲ್ 2023 (07:40 IST)
ಚಿಕ್ಕಬಳ್ಳಾಪುರ : ಸತತ 60 ವರ್ಷಗಳ ಕಾಲ ಪರಿಶಿಷ್ಟರ ಮತಗಳನ್ನು ಪಡೆದ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿದ ಕೊಡುಗೆ ಕೇವಲ ಶೂನ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ.

ತಾಲೂಕಿನ ಅವುಲಗುರ್ಕಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸಿದೆ.

ಈ ಭಾಗದ ರೈತರು ಹೂ ಬೆಳೆಯಲು ನೀರಿನ ಸಮಸ್ಯೆ ಹಿಂದೆ ಎಷ್ಟಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಬಿಜೆಪಿ ನೀಡಿದ ಭರವಸೆಯಂತೆ ಎರಡು ವರ್ಷದಲ್ಲಿ ಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸಲಾಗಿದೆ. ಇದರಿಂದಾಗಿ ರೈತರು ಸಮೃದ್ಧಿಯಾಗಿ ಬೆಳೆಗಳನ್ನು ಬೆಳೆಯಲು ಅನುಕೂಲವಾಗಿದೆ ಎಂದಿದ್ದಾರೆ. 

ಚಿಕ್ಕಬಳ್ಳಾಪುರದಿಂದ ಕೇತೇನಹಳ್ಳಿವರೆಗೂ ಹೋಗಲು ಈ ಹಿಂದೆ ಸಾಹಸ ಪಡಬೇಕಿತ್ತು. ಈ ಅಲ್ಪ ದೂರವನ್ನು ಕ್ರಮಿಸಲು ಸುಮಾರು ಒಂದು ಗಂಟೆ ಸಮಯ ಬೇಕಿತ್ತು. ಅಂತಹ ಕೆಟ್ಟ ರಸ್ತೆಯನ್ನು ಈಗ ದುರಸ್ತಿ ಮಾಡಲಾಗಿದೆ. ಇದೇ ದೂರವನ್ನು ಈಗ ಕೇವಲ 15 ನಿಮಿಷದಲ್ಲಿ ಸೇರಬಹುದಾಗಿದೆ. ಅಲ್ಲದೆ ಈ ಪ್ರದೇಶದ ರೈತರು ಕೃಷಿಯನ್ನು ಬಿಡುವ ಸ್ಥಿತಿಗೆ ತಲುಪಿದ್ದರು. ಆದರೆ ಈಗ ಗತ ವೈಭವಕ್ಕೆ ಮರಳುವ ಕಾಲ ಇಲ್ಲಿನ ರೈತರಿಗೆ ಬಂದಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments