Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಅಸ್ತ್ರ

ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಅಸ್ತ್ರ
ಬೆಂಗಳೂರು , ಶನಿವಾರ, 6 ಮೇ 2023 (13:12 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರಕಟಿಸಿ, ಡಬಲ್ ಎಂಜಿನ್ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
 
ವಿವಿಧ ಇಲಾಖೆಗಳ ನೇಮಕಾತಿ ದರ ಪ್ರಕಟಿಸಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ಕೊಟ್ಟಿದೆ. 40 ಪರ್ಸೆಂಟ್ ಸರ್ಕಾರದಲ್ಲಿ ಎಲ್ಲವೂ ಮಾರಾಟವಾಗಿದೆ. ನೇಮಕಾತಿಗಳಲ್ಲಿ ಅಕ್ರಮ, ಸಿಎಂ ಸ್ಥಾನಕ್ಕೂ ದರ ನಿಗದಿಯಾಗಿದೆ ಎಂದು ಕುಹಕವಾಡಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಎಐಸಿಸಿ ನಾಯಕರು ಸಹ ರೇಟ್ ಕಾರ್ಡ್ ಬಿಡುಗಡೆ ಮಾಡಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರ, ಇಂದು ಅತ್ಯಂತ ಮಹತ್ವದ ದಿನ. ಬಿಜೆಪಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ.

ಕರ್ನಾಟಕದ ಜನ ಮಾತ್ರ ಪದೇ ಪದೇ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಕರ್ನಾಟಕದ ಜನರಿಗೆ ಗೊತ್ತಿದೆ. ಬಿಜೆಪಿಯವರಿಗೂ ರೇಟ್ ಕಾರ್ಡ್ ಬಗ್ಗೆ ಗೊತ್ತಿದೆ. 40% ಅಲ್ಲ 50% ಕಮಿಷನ್ ನಡೆಯುತ್ತಿದೆ ಎಂಬುದು ವಾಸ್ತವ ಅಂಶ ಎಂದು ಗಂಭೀರ ಆರೋಪ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಕುಟುಂಬದ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!