Publish Date: Sat, 16 Sep 2017 (15:20 IST)
Updated Date: Sat, 16 Sep 2017 (15:22 IST)
ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೆಣೆಯಲು ಸಿದ್ದವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ವಗರದಲ್ಲಿ ಗಣಪತಿ ದೇವಾಲಯದಲ್ಲಿ ಆಯೋಜಿಸಲಾದ ಓಣಂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆ ಬಂದ ಕೂಡಲೇ ಬಿಜೆಪಿ ರಾಜಕೀಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆದರೆ, ರಾಜ್ಯದ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಹಣ ಹಂಚಿ ಗಿಮಿಕ್ ಮಾಡಿದ್ದಲ್ಲದೇ ಕುಟುಕು ಕಾರ್ಯಾಚರಣೆ ನಡೆಸಿ ಕಾಂಗ್ರೆಸ್ ಮೇಲೆ ಆರೋಪ ಹೊರಿಸಿತ್ತು ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.