Publish Date: Mon, 24 Sep 2018 (19:33 IST)
Updated Date: Mon, 24 Sep 2018 (19:39 IST)
ಕಾಂಗ್ರೆಸ್ ನಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಕೈ ಪಾಳೆಯದ ಯಾವ ಶಾಸಕರೂ ಬಿಜೆಪಿಗೆ ಸೇರುತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಠಿಯಾಗಿದೆ ಎಂದು ಸಚಿವ ದೂರಿದ್ದಾರೆ.
ಕಾರವಾರದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕಾಂಗ್ರೆಸ್ ಗೆ ಕೈ ಕೊಟ್ಟು ಯಾವ ಶಾಸಕರೂ ಬಿಜೆಪಿಗೆ ಸೇರುತ್ತಿಲ್ಲ ಎಂದರು.
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಐದು ವರ್ಷ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ವತಃ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ ಎಂದರು.
ಈ ವಿಷಯದಲ್ಲಿ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಶಾಸಕರು ಮುಂಬೈ ಅಥವಾ ಇತರ ಕಡೆ ಪ್ರಯಾಣ ಬೆಳೆಸುವುದು ಸಾಮಾನ್ಯ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು.