Publish Date: Fri, 30 Mar 2018 (09:49 IST)
Updated Date: Fri, 30 Mar 2018 (09:50 IST)
ಬೆಂಗಳೂರು: ಕಾಂಗ್ರೆಸ್ ಶಾಸಕರಾಗಿದ್ದುಕೊಂಡೇ ಬಿಜೆಪಿ ಸೇರುವುದಾಗಿ ಬಹಿರಂಗ ಹೇಳಿಕೆ ನೀಡಿದ್ದ ಅಫ್ಜಲ್ ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ವಿರುದ್ಧ ಆಕ್ರೋಶಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಗುತ್ತೇದಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
ಶಾಸಕ ಗುತ್ತೇದಾರ್ ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರಲಿಲ್ಲ. ಅದಕ್ಕೂ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಭೇಟಿಯಾಗಿದ್ದಲ್ಲದೆ, ಬಹಿರಂಗವಾಗಿ ಬಿಜೆಪಿ ಸೇರುತ್ತಿರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಈ ಕಾರಣಕ್ಕೆ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಇನ್ನು 6 ವರ್ಷಗಳ ಕಾಲ ಅವರು ಮತ್ತೆ ಕಾಂಗ್ರೆಸ್ ಸೇರಬೇಕೆಂದರೂ ಸಾಧ್ಯವಾಗದು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ