Publish Date: Tue, 23 Jan 2018 (20:28 IST)
Updated Date: Tue, 23 Jan 2018 (20:30 IST)
ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಜೆಡಿಎಸ್ ಪಕ್ಷ ಸೇರ್ಪಡೆಯಾಗಲ್ಲ. ಅಷ್ಟಕ್ಕೂ ಈ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಸಮಾಧಾನ ಜಿಲ್ಲೆಯ ಮಟ್ಟಿಗೆ ಸೀಮಿತವಾಗಿದ್ದು, ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ನಾನೂ ಕೂಡ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದು, ಎರಡು ಚುನಾವಣೆಗಳ ನಂತರ ಮುಖ್ಯಮಂತ್ರಿ ಹುದ್ದೆ ಕೇಳುತ್ತೇನೆ. ನನ್ನ ಬೆಂಬಲಿಗರಿಗೆ ಟಿಕೆಟ್ ತಪ್ಪಿಸುವ ಪ್ರಯತ್ನ ನಡೆದಿದ್ದು, ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಟಿಕೆಟ್ ನೀಡುವ ಭರವಸೆಯಿದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.