Select Your Language

Notifications

webdunia
webdunia
webdunia
webdunia

ಮಂಡ್ಯದ ಗಂಡು ಅಂಬರೀಷ್ ರಾಜಕೀಯಕ್ಕೆ ಗುಡ್‌ಬೈ?

ಮಂಡ್ಯದ ಗಂಡು
ಮಂಡ್ಯ , ಮಂಗಳವಾರ, 20 ಸೆಪ್ಟಂಬರ್ 2016 (14:46 IST)
ಕೆಲ ದಿನಗಳ ಹಿಂದೆ ಸಚಿವ ಸ್ಥಾನ ಕಳೆದುಕೊಂಡಿದ್ದ ರೆಬಲ್ ಸ್ಟಾರ್ ಅಂಬರೀಶ್, ಶೀಘ್ರದಲ್ಲಿಯೇ ತಮ್ಮ ಶಾಸಕ ಸ್ಥಾನ ಹಾಗೂ ಕೆಪಿಸಿಸಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಗುಡ್ ಬೈ ಹೇಳಲಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯ ಸಚಿವ ಸಂಪುಟ ಪುನಾರಚನೆಯಲ್ಲಿ ತಮ್ಮ ಹೆಸರು ಕೈಬಿಟ್ಟಿರುವುದರಿಂದ ತೀವ್ರವಾಗಿ ಅಸಮಾಧಾನಗೊಂಡಿದ ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್, ಕೆಲ ದಿನಗಳಿಂದ ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಶ್ವತವಾಗಿ ರಾಜಕೀಯದಿಂದ ದೂರು ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಅಂಬರೀಶ್ ಅವರ ಉತ್ತರಾಧಿಕಾರಿಯಾಗಿ ಅವರ ಧರ್ಮ ಪತ್ನಿ ಸುಮಲತಾ ಅವರು ಜೆಡಿಎಸ್ ಪಕ್ಷದಿಂದ ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸರಣಿ ಅಪಘಾತಕ್ಕೆ ಕಾರಣವಾಯ್ತು ಯುವತಿಯರ ಕಿಸ್ಸಿಂಗ್