"ಕಾಂಗ್ರೆಸ್ ಮುಕ್ತ ಭಾರತ" ಭಾರತೀಯ ಜನತಾ ಪಾರ್ಟಿಯ ಹಗಲು ಕನಸು ಎಂದು ಕಲಬುರ್ಗಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲು ಹಿನ್ನೆಲೆಯಲ್ಲಿ ಮಾತನಾಡಿದ ಖರ್ಗೆ, ಒಂದು ಕಾಲದಲ್ಲಿ ಬಿಜೆಪಿ ಕೇವಲ ಎರಡು ಸ್ಥಾನವನ್ನು ಮಾತ್ರ ಹೊಂದಿತ್ತು. ಹೀಗೆ ಬಿಜೆಪಿ ಅಹಂಕಾರದ ಮಾತುಗಳನ್ನು ಮಾತನಾಡಿದರೆ ಮತ್ತೆ ಅದೇ ಸ್ಥಿತಿಗೆ ತಲುಪುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿಯ ಹಗಲು ಕನಸು. ಕಾಂಗ್ರೆಸ್ ಮುಕ್ತ ಭಾರತ ಎಂದಿಗೂ ಸಾಧ್ಯವಿಲ್ಲದ ಮಾತು. ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಖ್ಯಾಬಲ ಇಲ್ಲದಿದ್ರೂ, ಬೆಜೆಪಿಗಿಂತ ಹೆಚ್ಚು ಮತಗಳನ್ನು ಗಳಿಸಿದೆ. ಚುನಾವಣೆ ಎಂದರೇ ಸೋಲು ಗೆಲವು ಸಹಜ ಎಂದು ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.