Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿಎಂ, ದಿಗ್ವಿಜಯ್ ಸುಪಾರಿ : ಕುಮಾರಸ್ವಾಮಿ

ಕಾಂಗ್ರೆಸ್
ಬೆಂಗಳೂರು , ಸೋಮವಾರ, 30 ಮೇ 2016 (15:40 IST)
ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸುಪಾರಿ ಪಡೆದಿದ್ದಾರೆ ಎಂದು  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
 
ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಪ್ರತಿಯೊಬ್ಬ ಸಚಿವರು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದಾರೆ. ವಿಪಕ್ಷಗಳ ಸಲಹೆಗಳಿಗೂ ಮಾನ್ಯತೆ ನೀಡುತ್ತಿಲ್ಲ ಎಂದರು.
 
ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರಕ್ಕೆ ರಕ್ಷಣೆ ಕೊಡುತ್ತಿರುವುದಲ್ಲದೇ ಭ್ರಷ್ಟರನ್ನು ರಕ್ಷಿಸುತ್ತಿದೆ. ಹಲವು ಸಚಿವರ ಅವ್ಯವಹಾರಗಳು ಬಹಿರಂಗವಾಗಿದ್ದರೂ ಸಿಎಂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
 
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅವನತಿಯ ಅಂಚಿಗೆ ತಲುಪುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯರಾಗಲಿ ಅಥವಾ ರಾಜ್ಯದ ಉಸ್ತುವಾರಿ ಹೊತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್‌ರಾಗಲಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ಮತ್ತು ದಿಗ್ವಿಜಯ್ ಸಿಂಗ್ ಸುಪಾರಿ ಪಡೆದಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.   

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರದಲ್ಲಿ ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ: ಕುಮಾರಸ್ವಾಮಿ ಸಂಕೇತ