ಕಾಂಗ್ರೆಸ್ ಸರ್ಕಾರ ದಲ್ಲಿ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮೇಲಿನ ಕೇಸ್ ಗಳನ್ನು ವಾಪಸ್ ಪಡೆದರು ಎಂದು ಬಿಜೆಪಿ ನಾಯಕರು ರೋಪಕ್ಕೆ ಅವರದೆ ಸರ್ಕಾರದಿಂದ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಲಾಖೆ ತಿಳಿಸಿದೆ. ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡಂತೆ ಬಹುತೇಕರು ಕಾಂಗ್ರೆಸ್ ಸರ್ಕಾರ ದಲ್ಲಿ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ನ 2013 ರಿಂದ 2018 ರವರೆಗೆ ರಾಜ್ಯದಲ್ಲಿನ ಸಿದ್ದರಾಮಯ್ಯ ಅವರ ಸರ್ಕಾರ PFI ಮೇಲಿನ ಮೊಕದ್ದಮೆ ಹಿಂಪಡೆದಿದೆ ಎಂದು ಬಿಜೆಪಿ ಯ ಸಿಟಿ ರವಿ, ಕಟೀಲು, ಆರ್. ಅಶೋಕ ಅವರು ಆರೋಪಿಸುತ್ತಿದ್ರು. ಈ ಹಿನ್ನಲೆ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ 1500 ಕೇಸ್ ಗಳನ್ನು ಹಿಂಪಡೆದುಕೊಂಡಿದ್ದಾರೆಯೇ ..? ಪಡೆದುಕೊಂಡಿದ್ದರೆ ಮಾಹಿತಿ ಒದಗಿಸಿ ಎಂದು ಕಾಂಗ್ರೆಸ್ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಗೃಹ ಇಲಾಖೆಯ DG ಮತ್ತು IG ಇಲಾಖೆಯ ಅಧಿಕಾರಿಗಳು RTI ಅಡಿಯಲ್ಲಿ ಉತ್ತರ ನೀಡಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ರೀತಿ ಉತ್ತರ ವಿಲ್ಲ ಎಂದು ತಿಳಿಸಿದೆ. ಈ ಮೂಲಕ ಬಿಜೆಪಿ ನಾಯಕರ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.