Select Your Language

Notifications

webdunia
webdunia
webdunia
webdunia

ಕೋಮಾದಲ್ಲಿರುವ ಕಾಂಗ್ರೆಸ್‌ ಸರ್ಕಾರದಿಂದ ಆಗುತ್ತಿಲ್ಲ ಅಭಿವೃದ್ಧಿ: ಆರ್‌.ಅಶೋಕ್

R Ashok

Sampriya

ಬೆಂಗಳೂರು , ಬುಧವಾರ, 4 ಸೆಪ್ಟಂಬರ್ 2024 (19:25 IST)
ಬೆಂಗಳೂರು: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿದ್ದು, ಜನರು ವಾಹನ ಚಲಾಯಿಸಲು ಪರದಾಡುವಂತಾಗಿದೆ. ಕಾಂಗ್ರೆಸ್ ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಕೊಡಲಿ ಎಂದು ಆಕ್ರೋಶ ಹೊರಹಾಕಿದರು.

ಬೆಂಗಳೂರಿನಲ್ಲಿ ಕಮಿಷನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ‍್ಯಾಂಡ್ ಬೆಂಗಳೂರಾಗಿದೆ ಎಂದು ದೂರಿದರು.

ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಅತ್ಯಾಚಾರ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ, ಡ್ರಗ್ಸ್‌ ದಂಧೆ ಹೆಚ್ಚಾಗಿದೆ ಎಂದು ದೂರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಅವರು ಈಗಲೇ ರಾಜೀನಾಮೆ ನೀಡಿದ್ರೆ ಗೌರವಯುತ: ಬಿಎಸ್‌ ಯಡಿಯೂರಪ್ಪ