Webdunia - Bharat's app for daily news and videos

Install App

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

Sampriya
ಭಾನುವಾರ, 22 ಜೂನ್ 2025 (12:54 IST)
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ಭ್ರಷ್ಟಾಚಾರ ಭ್ರಷ್ಟಾಚಾರ ಬಿಟ್ರೆ ಬೇರೆ ಯಾವುದೇ ಯೋಜನೆ ಇಲ್ಲ. ಎಲ್ಲೋ ಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯ ಸರ್ಕಾರವೇ ಉತ್ತೇಜನ ನೀಡುತ್ತಿದೆ ಅನ್ನಿಸುತ್ತೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರ ಪರ ಯೋಜನೆ ನೀಡಿದ್ರು. ಈಗ ಆ ಎಲ್ಲಾ ಯೋಜನೆ ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.  

ಸರ್ಕಾರದ ಭ್ರಷ್ಟಾಚಾರವನ್ನು ರಾಜ್ಯದ ಜನರ ಮುಂದಿಟ್ಟ ಕಾಂಗ್ರೆಸ್‌ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌. ಪಾಟೀಲ್‌ ಅವರಿಗೆ ಅವರ ಪಕ್ಷದವರೇ ಬೆದರಿಕೆ ಹಾಕುತ್ತಿದ್ದಾರೆ. ಬಿ.ಆರ್‌ ಪಾಟೀಲ್‌ ತಮ್ಮದೇ ಸರ್ಕಾರದ ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹಾಗಾಗಿ ಅವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. 

ಪಕ್ಷದ ಹಿತದೃಷ್ಟಿಯಿಂದ ಯಾರನ್ನು ರಾಜ್ಯಾಧ್ಯಕ್ಷರಾಗಿ ಮಾಡಬೇಕು ಎಂಬುದನ್ನು ರಾಷ್ಟ್ರೀಯ ವರಿಷ್ಠರು ತೀರ್ಮಾನಿಸುತ್ತಾರೆ. ನಾನು ಪಕ್ಷ ಕೊಟ್ಟ ಎಲ್ಲ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ