Webdunia - Bharat's app for daily news and videos

Install App

ಕಾಂಗ್ರೆಸ್ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ: ಬಿಎಸ್‌ವೈ

Webdunia
ಮಂಗಳವಾರ, 12 ಸೆಪ್ಟಂಬರ್ 2017 (16:00 IST)
ಕಾಂಗ್ರೆಸ್ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆಯಿಲ್ಲವಾಗಿದೆ. ಭ್ರಷ್ಟರಿಗೆ ಮಾತ್ರೆ ಮಣೆಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ನಗರಾಭಿವೃದ್ಧಿ ಸಚಿವ.ಕೆ.ಜೆ.ಜಾರ್ಜ್ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಹಿಸಿ ವ್ಯವಸ್ಥಿತವಾಗಿ ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ. ಪ್ರತಿಯೊಂದು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿಯೂ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments