ಬೆಂಗಳೂರು: ಲಿಂಗಾಯತ ಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಜಿಲ್ಲೆಗೆ ಪ್ರವೇಶ ನಿರ್ಬಂಧವಾಗಿರುವ ಮಹಾರಾಷ್ಟ್ರದ ಕೊಲ್ಹಾಪುರ ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿದ್ದಾರೆ.
ಅವಹೇಳನಕಾರಿ ಮಾತಿನ ಹಿನ್ನಲೆ ಸ್ವಾಮೀಜಿ ಮೇಲೆ ದಾಳಿ ಆಗಬಹುದು ಎಂಬ ಪೊಲೀಸ್ ಗುಪ್ತಚರ ಮಾಹಿತಿ ಆಧರಿಸಿ ವಿಜಯಪುರ ಡಿಸಿ ಸ್ವಾಮೀಜಿ ಅವರಿಗೆ ಜಿಲ್ಲೆಗೆ ಎರಡು ತಿಂಗಳು ಪ್ರವೇಶ ಮಾಡಬಾರದೆಂದು ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ!
ಕೊಲ್ಹಾಪುರ-ಕನೇರಿ ಕಾಡಸಿದ್ದೇಶ್ವರ ಮಠದ
ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ಎರಡು ತಿಂಗಳವರೆಗೆ ವಿಜಯಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಆದೇಶವನ್ನು ಹೊರಡಿಸಿರುವ ರಾಜ್ಯದ ಲಜ್ಜೆಗೇಡಿ ಕಾಂಗ್ರೆಸ್ ಸರ್ಕಾರ, ಮತ್ತೊಮ್ಮೆ ಹಿಂದೂ ಧರ್ಮ ಗುರುಗಳ ದನಿಯನ್ನ ಅಡಗಿಸುವ ದುಸ್ಸಾಹಸಕ್ಕೆ ಕೈಹಾಕಿದೆ.
ಈ ಹಿಂದೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ದಿವಂಗತ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್ ಐಆರ್ ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈಗ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ನಿಷೇಧ ಹೇರುವ ಮೂಲಕ @INCKarnataka
ಪಕ್ಷಕ್ಕೆ ವಾಕ್ ಸ್ವಾತಂತ್ರ್ಯ, ಸಂವಿಧಾನದಲ್ಲಿ ನಂಬಿಕೆಯಿಲ್ಲ ಎನ್ನುವುದನ್ನ ಮತ್ತೊಮ್ಮೆ ಸಾಬೀತುಪಡಿಸಿದೆ.