Publish Date: Tue, 10 Jun 2025 (15:03 IST)
Updated Date: Tue, 10 Jun 2025 (15:05 IST)
ಕಾರವಾರ: ಯಾವುದೇ ಕ್ಷಣದಲ್ಲದಾರೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಬಹುದು. ಇದರಿಂದ ಬಿಜೆಪಿ ಅಧಿಕಾರ ಹಿಡಿಯುವು ನಿಶ್ಚಿತ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಇಲ್ಲಿನ ಪ್ರೀಮಿಯರ್ ಹೋಟೆಲ್ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರಕ್ಕೆ 11 ವರ್ಷದ ಹಿನ್ನೆಲೆ ಕೈಗೊಂಡ ಕಾರ್ಯಚಟುವಟಿಕೆ ಕುರಿತು ಚರ್ಚೆಗೆ ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಮಾತನಾಡಿದರು.
ಹಿಂದುತ್ವದ ಪರ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆ. ಈ ಮೂಲಕ ಹಿಂದುತ್ವ ವಿಚಾರಧಾರೆ ಕುಗ್ಗಿಸಲು ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಎಂಧು ಆರೋಪ ಮಾಡಿದರು.
ಕೇಂದ್ರದ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅಡ್ಡಿ ಮಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಮೊಬೈಲ್ ಟವರ್ ಸ್ಥಾಪನೆ, ನೌಕಾನೆಲೆ ಯೋಜನೆ ನಿರಾಶ್ರಿತರಿಗೆ ಹೆಚ್ಚುವರಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ನಿರಂತರವಾಗಿ ಅಡ್ಡಿ ಪಡಿಸುತ್ತಿದೆ ಎಂದು ಆರೋಪ ಮಾಡಿದರು.