Webdunia - Bharat's app for daily news and videos

Install App

ರಾಜ್ಯದಲ್ಲಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ಆರ್‌ ಅಶೋಕ್

Sampriya
ಬುಧವಾರ, 17 ಏಪ್ರಿಲ್ 2024 (17:57 IST)
ಗೌರಿಬಿದನೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯವಾಗಿದೆ. ಇನ್ನು ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ  ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು ಹೀಗಾಗಿ ಅವರೇ ಶೀಘ್ರದಲ್ಲೇ ತಮ್ಮ  ಸರ್ಕಾರವನ್ನು ಕೆಡವಲಿದ್ದಾರೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಇಂದು ಗೌರಿಬಿದನೂರು ನಗರದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಪರ ಮತ ಯಾಚಿಸಿದರು.

ಭಾರತ ವಿಶ್ವದಲ್ಲೇ ನಂಬರ್ ವನ್ ಆಗಲು ಮತ್ತೇ ಮೋದಿ ಪ್ರಧಾನಿಯಾಗಲೇಬೇಕು. ಜನಪರ ಆಡಳಿತಕ್ಕೆ ಮತದಾರರು ನಾಂದಿ ಹಾಡಬೇಕು, ದೇಶದಲ್ಲಿ 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ನವರು ದೇಶವನ್ನು ಅಧೋಗತಿಗೆ ತಂದಿದ್ದರು. ಮೋದಿ ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ನಮ್ಮ ದೇಶದ ಕಡೆಗೆ ತಿರುಗಿ ನೋಡುವಂತಾಗಿದೆ ಎಂದರು.

ಕಾಂಗ್ರೆಸ್‌ ಪಕ್ಷ ಸ್ಥಳೀಯರಾದ ಮಾಜಿ ಸಚಿವ ಎನ್‌. ಎಚ್‌. ಶಿವಶಂಕರರೆಡ್ಡಿ, ಮಾಜಿ ಸಂಸದ ಡಾ. ಎಂ. ವೀರಪ್ಪಮೊಯ್ಲಿಅವರಿಗೆ ಟಿಕೆಟ್‌ ನೀಡದೆ ಹಣವಂತರಿಗೆ, ಬೆಂಗಳೂರಿನವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದ ಬಗ್ಗೆ ಇವರಿಗೇನು ಗೊತ್ತಿದೆ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments