Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಮಾಡುತ್ತೆ : ಗೃಹ ಸಚಿವ

Webdunia
ಗುರುವಾರ, 1 ಜೂನ್ 2023 (20:20 IST)
545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕಾರಣದಿಂದ ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ರದ್ದುಗೊಳಿಸಿತ್ತು...ಈಗ ನೂತನ ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಕೈಗೊಂಡು, ಹೊಸ ನೇಮಕಾತಿಗೆ ಆದೇಶ ಹೊರಡಿಸುವಂತ ಸುಳಿವು ನೀಡಿದೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ತನಿಖೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆ ಬಳಿಕ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ ಹೈಕೋರ್ಟ್ ನಲ್ಲಿದೆ. ನೇಮಕಾತಿಗೂ ಹೈಕೋರ್ಟ್ ತಡೆ ಇದೆ. ಈ ಸಂಬಂಧ ತಾರ್ಕಿಕ ಮತ್ತು ಕಾನೂನಾತ್ಮಕ ಅವಕಾಶಗಳ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು..ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತ ರೀತಿಯಲ್ಲಿ ಪಿಎಸ್‌ಐ ನೇಮಕಾತಿ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ...ಅಂದಹಾಗೇ ಹೈಕೋರ್ಟ್ ನಲ್ಲಿ ಪಿಎಸ್‌ಐ ಹಗರಣದ ತನಿಖೆಗೆ ತಡೆಯಾಜ್ಞೆಯಿದೆ. ಆ ತಡೆಯಾಜ್ಞೆ ತೆರವುಗೊಳಿಸಲು ಈಗ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಈ ಸಂಬಂಧ ಎಜೆ ಶಶಿಕಿರಣ್ ಶೆಟ್ಟಿ ಜೊತೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಸೋಮವಾರ ಮತ್ತೊಮ್ಮೆ ಎಜೆ ಜೊತೆಗೆ ಚರ್ಚಿಸಲಿದ್ದಾರೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments