ಬೆಂಗಳೂರು: ನಗರದ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಖಂಡಿಸಿ ಬಿಜೆಪಿ ನಾಯಕರು ಸೋಮವಾರ ಪ್ರತಿಭಟನೆ ನಡೆಸಿದರು.
ಜೈಲಿನ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿ ಉಗ್ರರಿಗೆ, ಖೈದಿಗಳಿಗೆ ಕಾಂಗ್ರೆಸ್ ಸರ್ಕಾರ ರಾಜಾತಿಥ್ಯ ನೀಡುತ್ತಿದೆ ಎಂದು ದೂರಿದರು.
ಅದಲ್ಲದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ, ನೈತಿಕ ಹೊಣೆ ಹೊತ್ತು ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿಟಿ ರವಿ, ಶಾಸಕ ಡಾ.ಅಶ್ವಥ್ ನಾರಾಯಣ, ಗೋಪಾಲಯ್ಯ, ಎಂ.ಕೃಷ್ಣಪ್ಪ, ಉದಯ್ ಗರುಡಾಚಾರ್, ಎಂ.ಮುನಿರಾಜು, ಧೀರಜ್ ಮುನಿರಾಜು, ಸಿ.ಕೆ.ರಾಮಮೂರ್ತಿ, ಜಿಲ್ಲಾಧ್ಯಕ್ಷ ಎಸ್ ಹರೀಶ್, ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.