ಹುಬ್ಬಳಿ : ಆಪಾದನೆ ಮಾಡುವವರು ಮೊದಲು ಶುದ್ಧಹಸ್ತರಿರಬೇಕು. ಆವಾಗ ಮಾತ್ರ ಅದಕ್ಕೆ ಬೆಲೆ ಬರುತ್ತದೆ. ಕಾಂಗ್ರೆಸ್ನವರು ದಿಂಬು ಹಾಸಿಗೆಯನ್ನೂ ಬಿಟ್ಟಿಲ್ಲ.
ಬಿಸ್ಕೆಟ್, ಕಾಫಿಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದೆ.
ಎಂಬಿ ಪಾಟೀಲ್, ಜಾರ್ಜ್, ಮಹದೇವಪ್ಪರಿಗೆ ಕೇಳಬೇಕು, ಸಿದ್ದರಾಮಯ್ಯ ಇಷ್ಟೆಲ್ಲಾ ಟಾರ್ಗೆಟ್ ಕೊಟ್ಟಿದ್ದರು ಎಂದು. ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದರೆ ನಡೆಯಲ್ಲ.
ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ. ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ? ಎಂದು ಸಿಎಂ ಪ್ರಶ್ನೆ ಮಾಡಿದರು.