Publish Date: Mon, 26 Jun 2017 (16:17 IST)
Updated Date: Mon, 26 Jun 2017 (16:19 IST)
ದಲಿತರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ತುರ್ತುಪರಿಸ್ಥಿತಿಯ ಕರಾಳ ದಿನ ಕುರಿತು ಆಯೋಜಿಸಿದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಜನತೆಯ ಮೇಲೆ ತುರ್ತುಪರಿಸ್ಥಿತಿ ಹೇರಿ ಇಂದಿಗೆ 42 ವರ್ಷಗಳಾಗಿವೆ. ಇಂದು ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಕಳುಹಿಸಿದ ದಿನವಾಗಿದೆ ಎಂದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮುಂಬೈನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಪಕ್ಷದವರೇ ಅವರ ಸೋಲಿಗೆ ಸಂಚು ರೂಪಿಸಿದ್ದರು. ಅವರು ದಿವಂಗತರಾದಾಗ ರಾಜ್‍ಘಾಟ್‌ನಲ್ಲಿ ಅಂತ್ಯಕ್ರಿಯೆಗೆ ಅವಕಾಶ ನೀಡಲಿಲ್ಲ ಎಂದು ಕಿಡಿಕಾರಿದರು.
ಜಲಿತ ಮುಖಂಡರಾಗಿದ್ದ ಜಗಜೀವನ್‌ರಾಮ್ ಅವರನ್ನು ಪ್ರಧಾನಿಯಾಗಲು ಕಾಂಗ್ರೆಸ್ ಬಿಡಲಿಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರಿಗೆ ದಲಿತರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.