Select Your Language

Notifications

webdunia
webdunia
webdunia
webdunia

ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದ ಕಾಂಗ್ರೆಸ್: ಆರ್‌ ಅಶೋಕ್

Nandini Prize Hike, CM Siddaramaiah, Opposition Leader R Ashok,

Sampriya

ಬೆಂಗಳೂರು , ಗುರುವಾರ, 27 ಮಾರ್ಚ್ 2025 (20:38 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 20 ತಿಂಗಳಿನಲ್ಲಿ ಹಾಲಿನ ದರವನ್ನ ಮೂರು ಬಾರಿ ಒಟ್ಟು 9 ರೂಪಾಯಿ ಹೆಚ್ಚಿಸಿ, ಬಡವರ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಎಕ್ಸ್‌ನಲ್ಲಿ ಬರೆದು ಪೋಸ್ಟ್ ಹಂಚಿಕೊಂಡಿದ್ದಾರೆ.

ಆಗಸ್ಟ್ 2023 - ₹3⬆️ ಏರಿಕೆ
ಜೂನ್ 2024 - ₹2⬆️ ಏರಿಕೆ
ಮಾರ್ಚ್ 2025 - ₹4⬆️ ಏರಿಕೆ

20 ತಿಂಗಳಲ್ಲಿ ಒಟ್ಟು - ₹9⬆️ ಏರಿಕೆ

ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 20 ತಿಂಗಳಿನಲ್ಲಿ ಹಾಲಿನ ದರವನ್ನ ಮೂರು ಬಾರಿ ಒಟ್ಟು 9 ರೂಪಾಯಿ ಹೆಚ್ಚಿಸಿದ್ದೀರಿ.

2023ರ ಆಗಸ್ಟ್ ನಲ್ಲಿ  3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ 2024 ಜೂನ್ ನಲ್ಲಿ 2 ರೂಪಾಯಿ ಏರಿಕೆ ಆಯ್ತು. ಈಗ ಮತ್ತೊಮ್ಮೆ ಏಕಾಏಕಿ 4 ರೂಪಾಯಿ ಹೆಚ್ಚಾಗಿದೆ.  

ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ದಿನಬಳಕೆ ವಸ್ತುಗಳ ಬೆಲೆಯಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ.

ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ. ಒಂದು ವೇಳೆ ಗ್ರಾಹಕರ ಮೇಲೆ ಹೊರೆ ಹೊರಿಸುವುದು ಅನಿವಾರ್ಯವಾದರೆ, ಹೆಚ್ಚಳ ಮಾಡಿರುವ ₹4 ರೂಪಾಯಿ ನೇರವಾಗಿ ಹಾಲು ಉತ್ಪಾದಕರ ಕೈಸೇರುವಂತೆ ನೋಡಿಕೊಳ್ಳಿ. ಆಡಳಿತ ವೆಚ್ಚ, ಮತ್ತೊಂದು ವೆಚ್ಚ ಎಂದು ಅತ್ತ ರೈತರಿಗೂ ಲಾಭವಿಲ್ಲದೆ ಇತ್ತ ಗ್ರಾಹಕರ ಜೇಬಿಗೂ ಕತ್ತರಿ ಹಾಕಿದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ, ಎಚ್ಚರಿಕೆ.

Share this Story:

Follow Webdunia kannada

ಮುಂದಿನ ಸುದ್ದಿ

Big Shocking: ಏಪ್ರಿಲ್ 1ರಿಂದಲೇ ನಂದಿನ ಹಾಲಿನ ದರ ಏರಿಕೆ ಜಾರಿ