Daily Horoscope

Select Your Language

Notifications

webdunia
webdunia
webdunia
webdunia

ಕಾಕ್ರೋಚ್ ಪಕ್ಷಕ್ಕೆ ಕಾಂಗ್ರೆಸ್ ಹಣಕಾಸು ನೆರವು ನೀಡುತ್ತಿದೆ: ಬಿ.ವೈ.ವಿಜಯೇಂದ್ರ

BY Vijayendra
ಚಿತ್ರದುರ್ಗ: ಕಾಂಗ್ರೆಸ್ ಮುಖಂಡರ ಹೇಳಿಕೆಗಳನ್ನು ಗಮನಿಸಿದರೆ, ಕಾಕ್ರೋಚ್ ಪಕ್ಷಕ್ಕೆ (ಕೆಜೆಪಿ) ಕಾಂಗ್ರೆಸ್‍ನಿಂದ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂಬ ಆರೋಪಗಳು ಸ್ಪಷ್ಟವಾಗುತ್ತಿವೆ ಎಂದು ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
 
ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಹುಲ್ ಗಾಂಧಿಯವರು ಕೆಜೆಪಿ ಸದಸ್ಯರ ಜೊತೆ ಪಾದಯಾತ್ರೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಪ್ರಿಯಾಂಕ್ ಖರ್ಗೆ ಹೇಳಿಕೆ, ಕಾಂಗ್ರೆಸ್ಸಿನವರ ದೆಹಲಿಯ ಹೇಳಿಕೆಗಳನ್ನು ಗಮನಿಸಿದರೆ ಈ ಸಂಘಟನೆಗಳಿಗೆ ಕಾಂಗ್ರೆಸ್ ಪಕ್ಷ ಹಣಕಾಸಿನ ನೆರವು ನೀಡುವುದು ಸ್ಪಷ್ಟವಾಗುತ್ತದೆ ಎಂದು ವಿಶ್ಲೇಷಿಸಿದರು.
 
ವಿದೇಶದಿಂದಲೂ ಹಣಕಾಸಿನ ನೆರವು ಬರುತ್ತಿದೆ. ಜೊತೆಗೆ ಕಾಂಗ್ರೆಸ್ಸಿನ ಹಣಕಾಸಿನ ನೆರವೂ ಸಿಗುತ್ತಿದೆ ಎಂದು ಟೀಕಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಸಮ್ಮತ ಹೋರಾಟ ಯಾರಾದರೂ ಮಾಡಬಹುದು. ಆದರೆ, ಚುನಾವಣಾ ಸೋಲಿನಿಂದ ಹತಾಶರಾಗಿರುವ ರಾಹುಲ್ ಗಾಂಧಿಯವರು ವಿವಿಧ ಸಂಘಟನೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಮತ್ತು ದೇಶದಲ್ಲಿ ಗೊಂದಲಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.
 
 ಕಮ್ಯುನಿಸ್ಟ್ ಪಕ್ಷಗಳನ್ನು ಬಳಸಿಕೊಂಡು ರಾಜ್ಯ ಹಾಗೂ ದೇಶದಲ್ಲಿ ಗೊಂದಲ ಉಂಟುಮಾಡುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಮತ್ತು ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಜೀ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಇಂತಹ ಪ್ರಯತ್ನಗಳು ತಾತ್ಕಾಲಿಕ ಎಂದು ನುಡಿದರು.
 
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆದಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಕೆಲವು ಹೆಸರುಗಳ ಕುರಿತು ಚರ್ಚಿಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು ಎಂದರು. 
 
ಸ್ಟಿಂಗ್ ಆಪರೇಷನ್ ವಿಚಾರವನ್ನು ಮುಖ್ಯಮಂತ್ರಿಗಳೇ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಬಹಿರಂಗ ಪಡಿಸಿದ್ದಾರೆ. ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಮಾಡಲು ಆಗುವುದಿಲ್ಲ. ಸ್ಟಿಂಗ್ ಆಪರೇಷನ್‍ನ ಪಿತಾಮಹ ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣದ ಕುರಿತು ಸ್ಪಷ್ಟ ತನಿಖೆಯಾಗಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಎμÉ್ಟೀ ದೊಡ್ಡ ಸ್ಥಾನದಲ್ಲಿರಲಿ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದು ತಾರ್ಕಿಕ ಅಂತ್ಯಕ್ಕೆ ಹೋಗಲು ಸಮರ್ಪಕ ರೀತಿಯಲ್ಲಿ ತನಿಖೆ ಆಗಲಿ ಎಂದು ಒತ್ತಾಯಿಸಿದರು.
 
ಮೈಸೂರು ದಸರಾ ಸಂದರ್ಭದಲ್ಲಿ ದನಕರುಗಳ ಜಾತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿದೆ. ದನಕರುಗಳಿಗೆ ಸರಿಯಾಗಿ ಮೇವಿನ ವ್ಯವಸ್ಥೆ ಮಾಡಿಲ್ಲ. ಬಂದಿರುವ ರೈತರಿಗೆ ಊಟದ ವ್ಯವಸ್ಥೆ ಇಲ್ಲದಿರುವುದು ಅತ್ಯಂತ ಬೇಸರದ ಸಂಗತಿ. ಮಹಿಳಾ ದಸರಾಕ್ಕೆ ಬಂದ ತಾಯಂದಿರಿಗೆ ಊಟದ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ವಿಜೇತರಿಗೆ ಬಹುಮಾನ ವಿತರಣೆಯೂ ಸಮರ್ಪಕವಾಗಿ ನಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಬೇರೆ ಪ್ರಪಂಚದಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇವರು ಸ್ಟಿಂಗ್ ಆಪರೇಷನ್‍ನಲ್ಲಿ ಮುಳುಗಿಹೋಗಿದ್ದಾರೆ ಎಂದರು.
 
ಭೀಕರ ಬರಗಾಲ ಇದೆ. 2500 ರೂ. ಘೋಷಿಸಿದ್ದಾಗಿ ತಿಳಿಸಿ ಮುಖ್ಯಮಂತ್ರಿ, ಸರಕಾರ ಕೈಕಟ್ಟಿ ಕೂತಿದ್ದಾರೆ. ಸರಕಾರ ವಿವೇಕತನದಿಂದ ವರ್ತಿಸಲಿ ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಬೆಳವಣಿಗೆಗಳು ಆಗಲಿವೆ ಎಂದು ನುಡಿದರು.
 
ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತು ಪಾದಯಾತ್ರೆಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರು ರೈತ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಶೀಲಿಸಲು ಈಗಾಗಲೇ ಸಮಿತಿಯನ್ನೂ ರಚಿಸಲಾಗಿದೆ. ದಸರಾ ಮುಗಿದ ಬಳಿಕ ಸಮಿತಿ ಬರಲಿದ್ದು, ರೈತರ ಅಹವಾಲುಗಳನ್ನು ಆಲಿಸಲಿದೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಮಾತ್ರವಲ್ಲದೇ ರಾಜ್ಯ ಸರ್ಕಾರದ ಹೊಣೆಗಾರಿಕೆಯೂ ಇದೆ. ರಾಜ್ಯ ಸರ್ಕಾರವು ಸಂಕಷ್ಟದಲ್ಲಿರುವ ಕಬ್ಬಿನ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
 
ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸವಾಗುತ್ತಿದೆ ಎಂಬ ರೈತರ ಆರೋಪವಿದೆ. ಇದರಲ್ಲಿ ಸತ್ಯಾಂಶವಿರುವ ಸಾಧ್ಯತೆ ಇದೆ. ಈ ವಿಷಯದಲ್ಲಿ ಸಮಗ್ರ ಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು. ರೈತರ ಈ ಬೇಡಿಕೆಗಳನ್ನು ಈಡೇರಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಅಭಿಪ್ರಾಯಪಟ್ಟರು.
 

Share this Story:

Follow Webdunia kannada

ಮುಂದಿನ ಸುದ್ದಿ

ಛೀ ಇದೆಂಥಾ ಅಸಹ್ಯ… ರಸ್ತೆಯಲ್ಲಿ ಮಕ್ಕಳ ಎದುರೇ ಮಹಿಳೆಯ ರೇಪ್ ಮಾಡಲು ಯತ್ನಿಸಿದ ವ್ಯಕ್ತಿ: ಕೊನೆಗೆ ಆಗಿದ್ದೇನು Video