Publish Date: Mon, 05 Mar 2018 (09:33 IST)
Updated Date: Mon, 05 Mar 2018 (09:34 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ಇಂದು ಸಂಜೆಯೇ ಸಿಎಂ ದೆಹಲಿಗೆ ತೆರಳಲಿದ್ದಾರೆ.
ಇಂದು ಮತ್ತು ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಮಾಡಲು ಕಾರ್ಯಕ್ರಮ ನಿಗದಿಗೊಳಿಸಿದ್ದರು. ನಾಳೆ ಮೈಸೂರಿನಲ್ಲಿ ಪೊಲೀಸ್ಆಯುಕ್ತರ ಕಚೇರಿ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿಗದಿಯಾಗಿತ್ತು.
ಆದರೆ ಹೈಕಮಾಂಡ್ ತುರ್ತಾಗಿ ಬರಲು ಕರೆ ನೀಡಿರುವುದರಿಂದ ಕಾರ್ಯಕ್ರಮ ರದ್ದುಗೊಳಿಸಿ ಸಿಎಂ ದೆಹಲಿಗೆ ತೆರಳಲಿದ್ದಾರೆ. ನಾಳೆಯ ಕಾರ್ಯಕ್ರಮಗಳು ಮಾರ್ಚ್ 10 ಕ್ಕೆ ಮುಂದೂಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ