Webdunia - Bharat's app for daily news and videos

Install App

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

Krishnaveni K
ಮಂಗಳವಾರ, 16 ಡಿಸೆಂಬರ್ 2025 (09:45 IST)
ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಿದ್ದು, ಡಿಕೆಶಿ ಬಣದ ನಡುವೆ ಶತಪ್ರಯತ್ನಗಳು ನಡೆಯುತ್ತಿವೆ. ಇದರ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಎಲ್ಲವೂ ಸರಿಯಾಗಿದೆ ಎಂದು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಾರಿದರೂ ಒಳಗೊಳಗೇ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಗುಟ್ಟಾಗೇನೂ ಉಳಿದಿಲ್ಲ. ಇದರ ನಡುವೆ ಎರಡೂ ಬಣದ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರುವ ಯತ್ನ ನಡೆಸುತ್ತಿದ್ದಾರೆ.

ಮೊನ್ನೆಯಷ್ಟೇ ವೋಟ್ ಚೋರಿ ನೆಪದಲ್ಲಿ ದೆಹಲಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಏನು ಭರವಸೆ ನೀಡಿದ್ದರು ಎಂಬುದನ್ನು ಅವರು ಬಹಿರಂಗಪಡಿಸಲು ನಿರಾಕರಿಸಿದ್ದರು.

ಆದರೆ ಮೂಲಗಳ ಪ್ರಕಾರ ಅಧಿಕಾರ ಹಂಚಿಕೆ ಬಗ್ಗೆ ಬಣ ರಾಜಕೀಯ ಮಾಡುತ್ತಿರುವವರಿಗೆ ಹೈಕಮಾಂಡ್ ನಾಯಕರು ಕಾಯುವಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಈಗ ರಾಹುಲ್ ಗಾಂಧಿ ಕೂಡಾ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಈಗ ತರಾತುರಿಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments