Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

DK Shivakumar
Photo Credit: AI Image
ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ.

ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಅವರ ಬೆಂಬಲಿಗರಿಗೆ ಬೇಸರ ಮೂಡಿಸಿದೆ. ಇನ್ನೊಂದು ಅವಕಾಶ ಕೇಳಬಹುದಿತ್ತು ಎಂದು ಅವರಿಗೆ ಸಲಹೆ ನೀಡಿದ ನಾಯಕರೂ ಇದ್ದಾರೆ. ಇದರ ನಡುವೆ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕಾಂಗ್ರೆಸ್ ನೊಳಗೆ ಭಿನ್ನಾಭಿಪ್ರಾಯವಿದೆ ಎಂದು ಜನರಿಗೆ ಭಾವನೆ ಬರಬಾರದು.

ಈ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿದ್ದರಾಮಯ್ಯ ಕೈಯಲ್ಲೇ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಿಸುವಂತೆ ಮಾಡಬೇಕು ಎಂಬುದು ಹೈಕಮಾಂಡ್ ಪ್ಲ್ಯಾನ್ ಆಗಿದೆ.

ಈ ವೇಳೆ ವಿದಾಯ ಭಾಷಣದ ಜೊತೆಗೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಘೋಷಣೆಯನ್ನೂ ಮಾಡಲಿದ್ದಾರೆ. ಈ ಮೂಲಕ ಯಾವುದೇ ಗೊಂದಲಗಳಿಲ್ಲದೇ ಸಿಎಂ ಸ್ಥಾನ ಬಿಟ್ಟುಕೊಡುತ್ತಿರುವುದಾಗಿ ಸಂದೇಶ ರವಾನಿಸಲು ಪ್ಲ್ಯಾನ್ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್