ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವೈಖರಿ ಬಗ್ಗೆ ಕಾಂಗ್ರೆಸ್ ನ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಉಂಟಾಗಿರುವ ಅಸಮಾಧಾನದ ಹೊಗೆ ತಣ್ಣಗಾಗಿಸಲು ಹೈಕಮಾಂಡ್ ಮುಂದಾಗಿದೆ.
									
			
			 
 			
 
 			
					
			        							
								
																	ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆನ್ನಲಾದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ರಾಜ್ಯ ನಾಯಕರ ಜತೆ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೈಕಮಾಂಡ್ ನ ಸೂಚನೆ ರವಾನಿಸಿದ್ದಾರೆ.
									
										
								
																	ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಜೆಡಿಎಸ್ ವಿರುದ್ಧ, ಪರ ಹೇಳಿಕೆಗಳನ್ನು ಮಾಧ್ಯಮಗಳಿಗೆ, ಬಹಿರಂಗವಾಗಿ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಈ ಬಗ್ಗೆ ಕೆಸಿ ವೇಣುಗೋಪಾಲ್ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಿ ಸಂಯಮದಿರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.