Publish Date: Wed, 10 Jan 2024 (15:45 IST)
Updated Date: Wed, 10 Jan 2024 (17:23 IST)
ಬೆಂಗಳೂರು :ರಾಜ್ಯ ಚುನಾವಣಾ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಕೂಡ ನಡೆಯಲಿದೆ. ಲೋಕಸಭಾ ಚುನಾವಣಾ ಸಿದ್ದತೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಸಚಿವರು. ಚುನಾಯಿತಿ ಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್ ಅಧ್ಯಕ್ಷರೂ ಸೇರಿದಂತೆ 1500 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಗೆ ಪೂರ್ವಸಿದ್ದತೆಯಾಗಿ ಮಂಗಳವಾರ ರಣ್ ದೀಪ್ ಸುರ್ಜೇವಾಲಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ .ಶಿವಕುಮಾರ್ ಹಾಗೂ ಸಚಿವರೊಡನೆ ಸಭೆ ನಡೆಸಿದ್ದರು.