Select Your Language

Notifications

webdunia
webdunia
webdunia
webdunia

39 ಹಾಲಿ ಶಾಸಕರಿಗೆ ಕೈ ಕೊಡಲಿರುವ ಕಾಂಗ್ರೆಸ್ ಹೈಕಮಾಂಡ್?

39 ಹಾಲಿ ಶಾಸಕರಿಗೆ ಕೈ ಕೊಡಲಿರುವ ಕಾಂಗ್ರೆಸ್ ಹೈಕಮಾಂಡ್?
ಬೆಂಗಳೂರು , ಶುಕ್ರವಾರ, 9 ಜೂನ್ 2017 (13:28 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭೆ ಚುನಾವಣೆಯಲ್ಲಿ 39 ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. 39 ಘಟಾನುಘಟಿ ಶಾಸಕರು ಟಿಕೆಟ್ ಕೈ ತಪ್ಪಲಿದೆ ಎನ್ನುವ ಮಾಹಿತಿಯಿಂದ ಆತಂಕಗೊಂಡಿದ್ದಾರೆ.
 
ಹಿರಿಯ ಕಾಂಗ್ರೆಸ್ ಶಾಸಕ ಮಲಕರೆಡ್ಡಿ ಮಾತನಾಡಿ, ಹೈಕಮಾಂಡ್ 39 ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತಿಲ್ಲ ಎನ್ನುವ ಬಗ್ಗೆ  ನನಗೆ ಮಾಹಿತಿಯಿಲ್ಲ. ಮಾಹಿತಿ ಬಂದ ನಂತರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
 
ಹೈಕಮಾಂಡ್ ನಿರ್ಧಾರದಿಂದ ಯಾರು ಯಾರಿಗೆ ಟಿಕೆಟ್ ಕೈ ತಪ್ಪಲಿದೆ ಎನ್ನುವ ಆತಂಕ ಪ್ರತಿಯೊಬ್ಬ ಶಾಸಕರನ್ನು ಕಾಡುತ್ತಿದೆ. ಒಂದು ವೇಳೆ, ಟಿಕೆಟ್ ಕೈ ತಪ್ಪಿದಲ್ಲಿ ಮುಂದೆ ಏನು ಮಾಡಬೇಕು, ಯಾವ ಪಕ್ಷ ಸೇರಬೇಕು ಎನ್ನುವ ಬಗ್ಗೆ ಶಾಸಕರು ತಮ್ಮ ಆಪ್ತರೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿಯಾದ ಪ್ರಧಾನಿ ಮೋದಿ