Daily Horoscope
✕

ಕೆಪಿಸಿಸಿಗೆ ನೂತನ ಸಾರಥಿ ಆಯ್ಕೆಗೆ ಹೈಕಮಾಂಡ್ ಕಸರತ್ತು

Webdunia
ಭಾನುವಾರ, 16 ಏಪ್ರಿಲ್ 2017 (14:19 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡಿದೆ.
 
ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವುದರಿಂದ ಪಕ್ಷಕ್ಕೆ ಹೊಸ ಶಕ್ತಿ ತಂದುಕೊಡುವ ನಾಯಕನನ್ನು ಆಯ್ಕೆ ಮಾಡಬೇಕು ಎನ್ನುವುದು ಹೈಕಮಾಂಡ್ ನಿಲುವಾಗಿದೆ.  
 
ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕು ಎನ್ನುವುದು ಪರಮೇಶ್ವರ್ ಬಯಕೆಯಾಗಿದೆ. ಒಂದು ವೇಳೆ, ಮುಂದಿನ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕು ಎನ್ನುವ ಅವರ ಮನದಾಳದ ಗುಟ್ಟು ಗುಟ್ಟಾಗಿ ಉಳಿದಿಲ್ಲ. 
 
ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರಾಗಲು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಆರ್.ಪಾಟೀಲ್ ಹೆಸರುಗಳು ಚಾಲ್ತಿಯಲ್ಲಿವೆ.   
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಶಿವಕುಮಾರ್ ಶಾಸಕರ ಮನಓಲೈಸುವ ಪ್ರಯತ್ನ ಮುಂದುವರಿಸಿದ್ದಾರೆ ಎನ್ನಲಾಗುತ್ತಿದೆ. 
 
ಹೈಕಮಾಂಡ್ ಬಹುತೇಕ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅಥವಾ ಎಂ.ಬಿ.ಪಾಟೀಲ್ ಆಯ್ಕೆಗೆ ಆಸಕ್ತಿ ತೋರುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಗೆ ಮಗುವಿನ ಜೊತೆ ಬಂದ ಸಂಸದೆ: ಮುಂದಾಗಿದ್ದು ಕ್ಯೂಟ್ ಕ್ಯೂಟ್ ಕ್ಷಣ Video

ಜಪಾನ್ ಪ್ರವಾಸದಿಂದ ಬೆಂಗಳೂರಿಗೆ ಬಂದಿಳಿದ ಸಿಎಂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ಸವಾಲು

ಆಶಾ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದ ಸಂಸದ ಡಾ ಸಿಎನ್ ಮಂಜುನಾಥ್ ನಡೆ

Karnataka Weather: ಈ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ; ಉತ್ತರ ಕರ್ನಾಟಕದಲ್ಲಿ ಚಳಿ ಮತ್ತು ಒಣ ಹವೆ

ವಧುವಿನ ತಂದೆ ಇನ್ನೇನು ಕಂತೆ ಕಂತೆ ವರದಕ್ಷಿಣೆ ಕೊಡಬೇಕು ಎನ್ನುವಾಗ ವರನ ತಂದೆ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಮುಂದಿನ ಸುದ್ದಿ
Show comments