ಬಿಜೆಪಿ ಅಭಿವೃದ್ಧಿಯ ಆಧಾರದಲ್ಲಿ ಧನಾತ್ಮಕ ಕಾರ್ಯಸೂಚಿಯದೊಂದಿಗೆ ಚುನಾವಣೆಗೆ ಹೋಗಬೇಕು ಎನ್ನುವ ಆಶಯ ಇದೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ಮೂಲಸೌಕರ್ಯದ ಅಭಿವೃದ್ಧಿ, ಸಂಪರ್ಕ ಕ್ಷೇತ್ರದ ಗಮನಾರ್ಹ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪೂರಕ ಎಂದು ಹೇಳಿದ್ರು...ಬಡವರಿಗೆ ಅಗತ್ಯವಿರುವ ಸೌಕರ್ಯಗಳಿಗಾಗಿ ಸ್ವಾತಂತ್ರ್ಯ ಬಂದ ಏಳು ದಶಕಗಳ ನಂತರವು ಜನರು ತೊಳಲಾಡುತ್ತದ್ದ ಪರಿಸ್ಥಿತಿ ಇತ್ತು. ಜನರ ಕಷ್ಟಗಳನ್ನು ಬಗೆಹರಿಸುವಲ್ಲಿ ನರೇಂದ್ರ ಮೋದಿಜಿ ದೊಡ್ಡ ಹೆಜ್ಜೆ ಇಟ್ಟರು. ಗಾಂಧೀಜಿ ಹೇಳಿದಂತೆ ಸ್ವಚ್ಛತೆಗೆ ಆದ್ಯತೆ ಕೊಡಲಾಯಿತು ಎಂದ್ಛುವರು ವಿವರಿಸಿದರು.ಇನ್ನೂ ಕಾಂಗ್ರೆಸ್ ಬೇರೆ ರಾಜ್ಯಗಳಲ್ಲಿ ಭರವಸೆ ಹಾಗೇ ಉಳಿದುದು ಯಾಕೆ? ಅದನ್ನು ಅನುಷ್ಠಾನಕ್ಕೆ ತರಲಿಲ್ಲವೇಕೆ? 2001ರಲ್ಲಿ ಇದೇ ರಾಜ್ಯದಲ್ಲಿ ಕೊಟ್ಟ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವ ಭರವಸೆ ಯಾಕೆ ಈಡೇರಿಸಲಿಲ್ಲ ಎಂದು ಟೀಕಿಸಿದ್ರು