Select Your Language

Notifications

webdunia
webdunia
webdunia
webdunia

ಆಪರೇಷನ್ ಕಮಲ ಭೀತಿಯಲ್ಲಿ ಸಂಕ್ರಾಂತಿ ಆಚರಣೆ ಮರೆತ ಕಾಂಗ್ರೆಸ್

ಆಪರೇಷನ್ ಕಮಲ ಭೀತಿಯಲ್ಲಿ ಸಂಕ್ರಾಂತಿ ಆಚರಣೆ ಮರೆತ ಕಾಂಗ್ರೆಸ್
ಬೆಂಗಳೂರು , ಮಂಗಳವಾರ, 15 ಜನವರಿ 2019 (09:26 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಆಪರೇಷನ್ ಕಮಲ ವಿದ್ಯಮಾನದಿಂದಾಗಿ ಸಂಕ್ರಾಂತಿ ಹಬ್ಬದ ಆಚರಣೆಯನ್ನೂ ಕಾಂಗ್ರೆಸ್, ಜೆಡಿಎಸ್ ಮರೆಯುವಂತಾಗಿದೆ.


ಮುಂಬೈನ ರೆಸಾರ್ಟ್ ನಲ್ಲಿ ಕೆಲವು ಅತೃಪ್ತ ಶಾಸಕರು ಈಗಾಗಲೇ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು, ಇಂದು ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ ಎಂಬ ಸುದ್ದಿ ಹಬ್ಬಿದೆ.

ಈ ಹಿನ್ನಲೆಯಲ್ಲಿ ದೆಹಲಿಯಿಂದ ದಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಆಪರೇಷನ್ ಕಮಲ ಭೀತಿಯಿಂದಾಗಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್-ಜೆಡಿಎಸ್ ಸಂಕ್ರಾಂತಿ ಹಬ್ಬದ ಆಚರಣೆಗೆ ಎಳ್ಳು ನೀರು ಬಿಟ್ಟು, ಸರ್ಕಾರ ಉಳಿಸುವತ್ತ ಗಮನ ಹರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಗುಡ್ಡ ಕುಸಿತ: ರಾಜ್ಯದ ಯೋಧ ಹುತಾತ್ಮ