Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್

ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್
bangalore , ಮಂಗಳವಾರ, 11 ಅಕ್ಟೋಬರ್ 2022 (20:59 IST)
ರಾಜ್ಯದಲ್ಲಿ 2 ತಂಡವಾಗಿ ಜನ ಸಂಕಲ್ಪ ಯಾತ್ರೆ ಮಾಡ್ತಿದ್ದೀವಿ. ಈಗಾಗಲೇ ಎರಡು ಸಮುದಾಯದ ಬೇಡಿಕೆ ಈಡೇರಿಸುವ ಕೇಲಸ ಸರ್ಕಾರ ಮಾಡಿದೆ. ಇನ್ನೂ ಹತ್ತಾರು ಬೇಡಿಕೆ ಇದ್ದು ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತೆ ಎಂದು BJP ರಾಜ್ಯಾಧ್ಯಕ್ಷ ನಳೀನ್​​ಕುಮಾರ್ ಕಟೀಲ್​​ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದರು, ಅಹಿಂದ ಚಳವಳಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನೇ ಕೊಡದೆ ಹೋದರು. ಅವರು ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಕೊಡಲಿಲ್ಲ ಎಂದು ಪ್ರಶ್ನೆ ಮಾಡಿದ್ರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದು ಕಾಂಗ್ರೆಸ್​​​ನವರು ಆಳ್ವಿಕೆ ಮಾಡಿದ್ರು. ಇದನ್ನ ಬಿಟ್ಟು ಏನು ಒಳ್ಳೆಯ ಕೆಲಸ ಮಾಡಿದ್ದಾರೆ. ನಾವು ಒಳ್ಳೆಯ ಕೆಲಸ ಮಾಡಿದ್ದೇವೆ, ಅದರ ಕ್ರೆಡಿಟ್​​​​​ ನಾವು ತಗೊಳ್ತೀವಿ ಅಷ್ಟೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಮರು ಪ್ರಶ್ನೆ ಹಾಕಿದ್ರು. ಕೇಂದ್ರ ಸರ್ಕಾರ ಕೊಟ್ಟ ಅನ್ನಭಾಗ್ಯವನ್ನ ನಾವು ಕೊಟ್ಟಿದ್ವೇವೆ ಎಂದು ಹೇಳ್ಕೋತಾರೆ. ದೇಶದಲ್ಲಿ ಭ್ರಷ್ಟಾಚಾರ ಪ್ರಾರಂಭ ಮಾಡಿದ್ದು ಕಾಂಗ್ರೆಸ್. ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್. ಭಯೋತ್ಪಾದನೆಯ ಇನ್ನೊಂದು ಹೆಸರು ಕೂಡ ಕಾಂಗ್ರೆಸ್ ಎಂದು ಲೇವಡಿ ಮಾಡಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ಮಂತ್ರಿ ಮನೆಗೆ ಮುತ್ತಿಗೆ ಹಾಕುವುದಾಗಿ ಆಟೋ ಚಾಲಕ ಸಂಘಟನೆಯಿಂದ ಎಚ್ಚರಿಕೆ