Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

by vijayendra
ಶಿವಮೊಗ್ಗ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ಮಸೂದೆ ಸಂಬಂಧ ಚರ್ಚೆಗೆ ಅವಕಾಶ ನೀಡದೆ ಆತುಆತುರವಾಗಿ ಮಂಜೂರು ಮಾಡಿರುವ ಹಿಂದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದರು. 

ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆಎಂದು ಹೇಳಿದರು.

ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದಿರುವ ಕುರಿತು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ
ಮಾರಕ. ತರೀಕೆರೆಯಲ್ಲಿ ನಮ್ಮ ಕಾರ್ಯಕರ್ತ ವಿಕಾಸ್ ಪುತ್ತೂರು ಭಾಷಣವನ್ನೇ ಆರಂಭಿಸಿರಲಿಲ್ಲ. ಅಲ್ಲಿ ಪೊಲೀಸ್ ಅಧಿಕಾರಿಗಳು ಹೋಗಿ ನೋಟಿಸ್ ಕೊಟ್ಟು, ನೀವೇನಾದರೂ ಮಾತನಾಡಿದರೆ, ಬಂಧಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪ ಮಾಡಿದರು. 

ದಕ್ಷಿಣ ಕನ್ನಡದಲ್ಲಿ ಬಜರಂಗದಳದ ಕಾರ್ಯಕರ್ತ ಶರಣ್ ಪಂಪ್ವೆಲ್ ಗಡಿ ದಾಟದಂತೆ ಕಡಿವಾಣ ಹಾಕಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ಪುನೀತ್ ಕೆರೆಹಳ್ಳಿ ಪ್ರಾಮಾಣಿಕವಾಗಿ ಬಾಂಗ್ಲಾದವರನ್ನು ಪತ್ತೆ ಹಚ್ಚಿ ಪೊಲೀಸ್ ಇಲಾಖೆ ಕೆಲಸ ಮಾಡಿದ್ದಾರೆ. ಅಂತವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ಆರೋಪ ಮಾಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ