Publish Date: Sun, 07 Jan 2018 (19:54 IST)
Updated Date: Sun, 07 Jan 2018 (19:56 IST)
ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್, ಮೋದಿ ಮಧ್ಯ ಪ್ರವೇಶಿಸಿದರೆ ಭಿನ್ನರಾಗ ತಳೆಯುತ್ತಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಟೀಕಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಲಿ ಎಂದು ಕಾಂಗ್ರೆಸ್ ಈಗ ಹೇಳುತ್ತಿದೆ. ಆದರೆ, 10 ವರ್ಷ ಕಾಂಗ್ರೆಸ್‌ನವರೇ ಪ್ರಧಾನಿಯಾಗಿದ್ದರೂ ಆಗ ಸಮಸ್ಯೆ ಬಗೆಹರಿಸಲು ಇವರಿಗೆ ಏಕೆ ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ಹಾಗೂ ಅಮಿತ್ ಶಾ ಅವರಿಂದಾಗಿ ಗೋವಾ ಮುಖ್ಯಮಂತ್ರಿಗಳ ಮಾತಿನ ಧಾಟಿ ಬದಲಾಗಿದೆ. ಪರಿಕ್ಕರ್ ನಿರ್ಧಾರಕ್ಕೆ ಬದ್ಧ ಎಂದು ಅಲ್ಲಿನ ಕಾಂಗ್ರೆಸ್ ಅಧ್ಯಕ್ಷರು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಈ ಕಾರ್ಯ ಮಾಡಲಿ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.