Select Your Language

Notifications

webdunia
webdunia
webdunia
webdunia

ಸಿಎಂ ಬದಲಾವಣೆಗೆ ವಿರೋಧ ಪಕ್ಷದವರಿಗಿಂತ ಕಾಂಗ್ರೆಸ್‌ನವರೇ ಉತ್ಸುಹಕರಾಗಿದ್ದಾರೆ:ಬಸವರಾಜ ಬೊಮ್ಮಾಯಿ

MUDA Scam, Chief Minister Siddaramaiah, MP Basavaraja Bommai,

Sampriya

ಗದಗ , ಸೋಮವಾರ, 7 ಅಕ್ಟೋಬರ್ 2024 (16:48 IST)
Photo Courtesy X
ಗದಗ: ಹಿರಿಯ ಸಚಿವರೆಲ್ಲ ದೆಹಲಿ ಭೇಟಿ ನೋಡುತ್ತಿದ್ದರೆ, ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆಗಳು ನಡೆಯುತ್ತಿವೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಕಾತುರರಾಗಿದ್ದಾರೆಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ಇನ್ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಸತತ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಆಗುತ್ತಿರುವ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಇಂತಹ ಸರ್ಕಾರ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ಟೀಕಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ‌ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ. ಈ ಸರ್ಕಾರವನ್ನು ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೋಲ್ಕತ್ತ:ಕಿರಿಯ ವೈದ್ಯರ ಆಮರಣಾಂತ ಉಪವಾಸ ಮೂರನೇ ದಿನಕ್ಕೆ