Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ: ಸಿದ್ದರಾಮಯ್ಯ

CM Siddaramaiah
ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲವಾಗಿದೆ. ಬಿಜೆಪಿ ತನ್ನ ರಾಜಕೀಯಕ್ಕಾಗಿ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ‌ ಇದೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. 2023 ರಲ್ಲಿ ಸಂಸತ್‌ನಲ್ಲಿ ಬಿಲ್ ಪಾಸ್ ಆಗಿದೆ. ಅದನ್ನ ಅವರು ಜಾರಿ ಮಾಡಬೇಕು. ಇನ್ನೂ ಮುಂದಿನ ಚುನಾವಣೆಗೆ ಮೀಸಲಾತಿ ಜಾರಿ ಮಾಡಲಿ ಎಂದು ಹೇಳಿದರು. 

ಇನ್ನೂ ನಿನ್ನೆ ಸಂವಿಧಾನಕ್ಕೆ ತಿದ್ದುಪಡಿ ತರುವುದಕ್ಕೆ ಹೋಗಿ ನಿನ್ನೆ ಫೇಲ್ ಆಯಿತು. ಮಹಿಳಾ ಮೀಸಲಾತಿಗೆ ಮಾತ್ರ ಸಂವಿಧಾನದ ತಿದ್ದುಪಡಿ ಮಾಡಿದ್ರೆ, ಡಿಲಿಮಿಟೇಷನ್ ಸೇರಿಸದೇ ಅದೊಂದೆ ಮಾಡಿದ್ರೆ ಪಾಸ್ ಆಗ್ತಿತ್ತು. ಅದನ್ನ ಮಿಕ್ಸ್ ಮಾಡಿ ಮಾಡಿದ್ರು. ಅದಕ್ಕೆ ಸೋಲಾಗಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ