Publish Date: Sat, 13 May 2023 (18:37 IST)
Updated Date: Sat, 13 May 2023 (18:39 IST)
ಚುನಾವಣೆಯಲ್ಲಿ ಬಹುಮತ ಸಾಧಿಸಿದರುವ ಹಿನ್ನೆಲೆಯಲ್ಲಿ ಕಾಂಗ್ರೆಸದ ನಾಯಕರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಸಿದಾರಡ. ಅಪಾರ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ.
ಈಗಾಗಲೇ ಪೊಲೀಸ್ ಇಲಾಖೆಯಿಂದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೂಕ್ತ ಬಂದೋಬಸ್ತ್ ಹಾಗೂ ಸಂಚಾರ ವ್ಯವಸ್ಥೆಯ ಬಗ್ಗೆ ಜಾಗೃತರಾಗುವಂತೆ ಹೇಳಲಾಗಿದೆ. ಇತ್ತ ಕಾಂಗ್ರೆಸ್ ಪಾಳಯದಲ್ಲೂ ಸರ್ಕಾರ ರಚನೆಯ ಚಟುವಟಿಕೆ ಗರಿಗೆದರಿದೆ. ಇಂದೇ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಕೈ ನಾಯಕರು ಚರ್ಚಿಸುವ ಸಾಧ್ಯತೆ ಇದೆ.