Select Your Language

Notifications

webdunia
webdunia
webdunia
webdunia

ವಿರೋಧ ಪಕ್ಷವಾಗಲು ಕೂಡ ಕಾಂಗ್ರೆಸ್ ನಾಲಾಯಕ್ : ನಳಿನ್ ಕುಮಾರ್ ಕಟೀಲ್ ಕಿಡಿ

ವಿರೋಧ ಪಕ್ಷವಾಗಲು  ಕೂಡ ಕಾಂಗ್ರೆಸ್ ನಾಲಾಯಕ್
ಸಿಎಂ ಆಗ್ತೇವೆ ಎಂದು ಕೆಲವರು ಶರ್ಟ್, ಪ್ಯಾಂಟ್ ಹೊಲಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದಾರೆ. ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಸಿಎಂ ಆಗ್ತೇವೆ ಅಂತಾ ಕೆಲವರು ಕೋಟ್‌ ಹೊಲಿಸಲು ಅಂಗಡಿಗೆ ಕೊಟ್ಟಿದ್ದಾರೆ. ಇನ್ನೂ ಕೆಲವರು ಹೊಸ ಪ್ಯಾಂಟ್‌ ಶರ್ಟ್‌ ಖರೀದಿಸಿದ್ದಾರೆ. ಇನ್ನೂ ಕೆಲವರು ಅವರೊಳಗೇ ಪ್ಯಾಂಟ್‌, ಶರ್ಟ್‌ ಹರಿಯಲು ಶುರು ಮಾಡಿದ್ದಾರೆ. ಮೂರು ಪಾರ್ಟಿಯಲ್ಲಿ ಮೂರು ವಿಭಿನ್ನತೆ ಎಂದು ಟಾಂಗ್ ನೀಡಿದ್ರು....ಇನ್ನೂ ಕಾಂಗ್ರೆಸ್, ಜೆಡಿಎಸ್ ಮನೆ ಖಾಲಿ ಆಗುತ್ತಿದೆ. ಬೊಮ್ಮಾಯಿ ನೇತೃತ್ವ, ಯಡಿಯೂರಪ್ಪರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿರೋಧ ಪಕ್ಷವಾಗಲು  ಕೂಡ ಕಾಂಗ್ರೆಸ್ ನಾಲಾಯಕ್ ಎಂಬ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಪಕ್ಷವನ್ನ ಕಟುವಾಗಿ ಟೀಕಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ-ಸಿದ್ದರಾಮಯ್ಯ